ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‍ಗೆ ಮಾತೃ ವಿಯೋಗ

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್‍ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.

Related Posts

Leave a Reply

Your email address will not be published.