HomeFresh Newsಪುಂಜಾಲಕಟ್ಟೆ: ಹೃದಯಾಘಾತದಿಂದ ಯುವತಿ ಸಾವು

ಪುಂಜಾಲಕಟ್ಟೆ: ಹೃದಯಾಘಾತದಿಂದ ಯುವತಿ ಸಾವು

ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯ ಮಧ್ವಗುತ್ತು ಎಂಬಲ್ಲಿ ಸಂಭವಿಸಿದೆ.

ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‍ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ. ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ತಿಳಿಸಿದ್ದಾರೆ. ನಂತರ ಮೃತ ದೇಹವನ್ನು ಹೆಚ್ಚಿನ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಮಿತ್ರಾ ಅವರು ಪದವೀಧರೆಯಾಗಿದ್ದು, ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments