ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು.
ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಗೊಟ್ಟು ಮತ್ತು ಎಸ್ ಬಿ ಜಯರಾಮ ರೈ ಮತ್ತು ಅರಿಯಡ್ಕ ಗ್ರಾ.ಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಕಾವು ಸಿ.ಎ ಬ್ಯಾಂಕ್ ಅಧ್ಯಕ್ಷ ನನ್ನ ಅಚ್ಚುತ ಮೂಡೆತ್ತಾಯ, ಮಾಸ್ ಸಂಸ್ಥೆಯ ನಿರ್ದೇಶಕ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟಿ ಮಹಾಬಲೇಶ್ವರ ಭಟ್, ಮುಖ್ಯ ಮಾರುಕಟ್ಟೆ ಅಧಿಕಾರಿ ಕೆ ಎಂ ಲೋಕೇಶ್ ಉಪಸ್ಥಿತರಿದ್ದರು.