ಪುತ್ತೂರಿನಲ್ಲಿ ಸೆ.29, 30ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಪುತ್ತೂರು:ಈ ಬಾರಿಯ ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸೆ.29 ಹಾಗೂ 30 ರಂದು ನಡೆಯಲಿದ್ದು, “ಸಾಹಿತ್ಯ ಪರಿಷತ್ತಿನ ನಡಿಗೆ ಯುವಜನತೆಯ ಕಡೆಗೆ” ಎಂಬ ಘೊಷವಾಕ್ಯದೊಂದಿಗೆ ವಿಶೇಷವಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಕಾರ್ಯಕ್ರಮದಲ್ಲಿ ವಿಶೇಷ ಚಟುವಟಿಕೆ ಹಾಗೂ ವೈವಿಧ್ಯಮಯ ತರುವ ನಿಟ್ಟಿನಲ್ಲಿ ಸಮ್ಮೇಳನ ನಡೆಯಲಿದೆ ಎಂದು ಅವರು ತಿಳಿಸಿದರು.
ಸಾಹಿತ್ಯ ಆಸಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರಿಗೆ ಕವನ ಹಾಗೂ ಕಥಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಅಲ್ಲದೆ ಸಮ್ಮೇಳನದಲ್ಲಿ ವಿಚಾರಗೋಷ್ಠಿಗೆ ಮಂಡನೆ ಅವಕಾಶ ನೀಡಲಾಗಿದ್ದು, ಮುಖ್ಯವಾಗಿ ಯುವ ಸಮುದಾಯಕ್ಕೆ “ನನ್ನ ಮೆಚ್ಚಿನ ಸಾಹಿತ್ಯ” ಎಂಬ ವಿಷಯದಲ್ಲಿ ನಡೆಯಲಿದೆ. ಪಿಯುಸಿ ಹಾಗೂ ಮೇಲ್ಪಟ್ಟ ತರಗತಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳಿಗೆ ಐದು ನಿಮಿಷಗಳ ಕಾಲ ಮಂಡನೆಗೆ ಅವಕಾಶವಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಘಟಕದ ಕಾರ್ಯದರ್ಶಿ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ನಿಕಟಪೂರ್ವ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್, ನಿವೃತ್ತ ಪ್ರಿನ್ಸಿಪಾಲ್ ಮಾಧವ ಭಟ್, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಉಪಸ್ಥಿತರಿದ್ದರು