ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ : ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಆಚರಣೆ
ಪುತ್ತೂರು: ರಮಾನಾಥ ರೈ ಅವರ ಶಾಸಕರಾಗಿ, ಸಚಿವರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಮಾರ್ಗದರ್ಶನ, ಸೇವೆಗಳು ಇನ್ನೂ ರಾಜ್ಯಕ್ಕೆ ಬೇಕಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಅವರು ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟು ಹಬ್ಬ ಅಭಿನಂದನಾ ಸಮಿತಿ , ಯುವ ಕಾಂಗ್ರೆಸ್ ವಿಟ್ಲ-ಉಪ್ಪಿನಂಗಡಿ ಮತ್ತು ವಲಯ ಕಾಂಗ್ರೆಸ್ ಪೆರ್ನೆ ಇವುಗಳ ನೇತೃತ್ವದಲ್ಲಿ ರಮಾನಾಥ ರೈ ಅವರ 71ನೆಯ ಹುಟ್ಟು ಹಬ್ಬ ಸಂಭ್ರಮಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಭಾ ಕಾರ್ಯಕ್ರಮದ ಮೊದಲು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರು ರಕ್ತದಾನ ಶಿಬಿರವನ್ನು ಉದ್ಘಾಟನೆ ಮಾಡಿದರು. ಇದೆ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ ಅವರ 71ನೆ ಹುಟ್ಟುಹಬ್ಬದ ಪ್ರಯುಕ್ತ 71 ಮಂದಿಯಿಂದ ರಕ್ತದಾನ ಮಾಡಿದರು. ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ,ಅಬಿನಂದನಾ ಸಮಿತಿ ಗೌರವ ಅಧ್ಯಕ್ಷ ಡಾ. ರಾಜಾರಾಂ ಕೆಬಿ, ಅಭಿನಂದನಾ ಸಮಿತಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಪ್ರದಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ವೇದಮೂರ್ತಿ ವಿದ್ವಾನ್ ಕೆ. ಕೃಷ್ಣಮೂರ್ತಿ ಕಾರಂತ
ಮತ್ತಿತರರು ಉಪಸ್ಥಿತರಿದ್ದರು.