HomeFresh Newsದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಪುತ್ತೂರು : ದ.ಕ.ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ಆಯ್ಕೆಯಾಗಿದ್ದಾರೆ. ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Dr. Deepak rai
Dr. Deepak rai

ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕಿನ ಈಶ್ವರಮಂಗಲ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ನಿಖಿಲ್.ಕೆ,ಉಪಾಧ್ಯಕ್ಷರಾಗಿ ಬಂಟ್ವಾಳ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಪ್ರಶಾಂತ್, ಉಪ್ಪಿನಂಗಡಿ ಸುಮದಾಯ ಆರೋಗ್ಯ ಕೇಂದ್ರದ ಡಾ.ಕೃಷ್ಣಾನಂದ ಕೆ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯ ಡಾ. ರಾಜೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ಬಂಟ್ವಾಳ ತಾಲೂಕಿನ ಸಜಿಪನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹಮ್ಮದ್ ತುಫೈಲ್,

Dr. Nikil k
Dr. Nikil k

ಜತೆ ಕೋಶಾಧಿಕಾರಿಯಾಗಿ ಪುತ್ತೂರು ತಾಲೂಕಿನ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಮಿತಾ, ಜಿಲ್ಲಾ ಪ್ರತಿನಿಧಿಯಾಗಿ ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಅಮಿತ್‍ಕುಮಾರ್ ಟಿ.ಅವರನ್ನು ಆಯ್ಕೆ ಮಾಡಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments