ಪುತ್ತೂರು ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್ ಪಥಸಂಚಲನ.

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಗಲಭೆಕೋರರಿಗೆ ಎಚ್ಚರಿಕೆಗೆ ನೀಡಲು ಮತ್ತು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆಗಾಗಿ ರಾಜ್ಯ ಮೀಸಲು ಪಡೆಯ ಸಶಸ್ತ್ರ ಪೊಲೀಸರಿಂದ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಮತ್ತು ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಜು. 28ರಂದು ಪುತ್ತೂರು ಪೇಟೆಯಲ್ಲಿ ಪಥ ಸಂಚಲನ ನಡೆಯಿತು.

ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆಗೆ ಸದಾ ಜಾಗೃತರಾಗಿರುವ ಪೊಲೀಸ್ ಪಡೆ ಬೆಳಿಗ್ಗೆ ದರ್ಬೆ ವೃತ್ತದಿಂದ ಹೊರಟು ಬೊಳುವಾರಿನ ತನಕ ಪಥ ಸಂಚಲನ ನಡೆಯಿತು. ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ರಾಜೇಶ್ ಕೆ.ವಿ, ಕಾರವಾರ ಪೆÇಲೀಸ್ ಠಾಣೆ ಎಸ್.ಐ ವಿಜಯೇಂದ್ರ ಮತ್ತು ಎ.ಎಸ್.ಐ ಗಳು, ಪೊಲೀಸರು ಪಥ ಸಂಚಲನದಲ್ಲಿ ಭಾಗವಹಿಸಿದರು.

Related Posts

Leave a Reply

Your email address will not be published.