ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಯತ್ನ : ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹೇಳಿಕೆ
ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ ಬಂದಿಲ್ಲ. ಮುಂದಿನ ದಿನ ಇಂತಹ ಪ್ರತಿಭಟನೆ ಮಾಡಲು ತಯಾರಾಗಬೇಕೆಂಬ ಬಿಜೆಪಿಯ ನಾಯಕರ ಹೇಳಿಕೆ ನಮಗೆ ಪ್ರಯೋಜನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕ ಬಂದಿರುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಹತಾಶ ಮನೋಭಾವದಿಂದ ಎನೆನೋ ಹೇಳಲು ಹೊರಟ್ಟಿದ್ದಾರೆ. ಬ್ಯಾನರ್ ಹಾಕಿದ ವಿಚಾರದಲ್ಲಿ ತಪ್ಪಿತಸ್ಥರು ಯಾರೆ ಆದರೂ ಪೊಲೀಸರು ಅವರನ್ನು ಹಿಡಿಯಬೇಕು. ನಾವಂತು ಪಕ್ಷದ ವತಿಯಿಂದ ಬ್ಯಾನರ್ ವಿಚಾರದಲ್ಲಿ ಕೈ ಹಾಕಲಿಲ್ಲ ಎಂದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಅವರು ಮಾತನಾಡಿ ಸಂಜೀವ ಮಠಂದೂರು ಅವರು ಈಗ ಜೋರಾಗಿದ್ದಾರೆ.ಅವರು ಶಾಸಕರಾಗಿದ್ದಾಗ ಜೋರಾಗಿರುತ್ತಿದ್ದರೆ ಅವರಿಗೆ ಶಾಸಕತ್ವದ ಟಿಕೇಟ್ ಸಿಗುತ್ತಿತ್ತು. ಆದರೆ ಈಗ ಅವರು ಬೀದಿಗೆ ಬಂದಿದ್ದಾರೆ. ಇವತ್ತು ಅಧಿಕಾರ ಬಿಟ್ಟು ನೀರಿನಿಂದ ಹೊರ ಬಂದ ಮೀನಿನಂತೆ ಆಗಿದ್ದಾರೆ. ಯಾಕೆಂದರೆ ಬ್ಯಾನರ್ ಹಾಕಿದ ವಿಚಾರದಲ್ಲಿ ಅವರು ಹಿಂದು ಕಾರ್ಯಕರ್ತರಿಗೆ ಧಿಕ್ಕಾರ ಹಾಕಿದ್ದು ಯಾಕೆ ಎಂದ ಅವರು ಬಿಜೆಪಿಯವರು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ, ಟೀಕೆ ಮಾಡುವುದು ಬೇಡ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಶುಕೂರ್ ಹಾಜಿ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ, ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಉಪಸ್ಥಿತರಿದ್ದರು.