ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ : ಗಾಯಾಳುಗಳನ್ನು ವಿಚಾರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಇಂತಹ ಘಟನೆ ಮತ್ತೆ ಮರುಕಳಿಸಬಾರದು, ಇದೊಂದು ಹೀನ ಕೃತ್ಯ, ಪೊಲೀಸರ ಈ ಅಮಾನವೀಯ ಕೃತ್ಯವನ್ನು ಖಂಡಿಸುತ್ತೇನೆ ಎಂದರು.

ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ. ಈ ಬಗ್ಗೆ ಈಗಾಗಲೇ ದ.ಕ. ಜಿಲ್ಲಾ ಎಸ್ಪಿಗೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುಂತೆ ಒತ್ತಾಯಿಸಿದ್ದೇನೆ. ಯಾವ ಪೆÇಲೀಸರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ನಡೆಸಲಿದೆ ಎಂದು ಶಾಸಕ ಹರೀಶ್ ಪೂಂಜ ಎಚ್ಚರಿಸಿದರು.

Related Posts

Leave a Reply

Your email address will not be published.