ಜೂನ್ 17 ಮತ್ತು 18 : ಪುತ್ತೂರು ಜೈನಭವನದಲ್ಲಿ ಹಲಸು ಮತ್ತು ಹಣ್ಣುಗಳ ಮೇಳ-2023

ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 6ನೇ “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇಳದಲ್ಲಿ ಸುಮಾರು 30ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಗಳ ಮಳಿಗೆಗಳಿವೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ ತಿಂಡಿಗಳು ಜೊತೆಗೆ ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳ ಗಿಡಗಳು, ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿವಿಧ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ, ಹಲಸುಗಳನ್ನು ಸುಲಭವಾಗಿ ಕತ್ತರಿಸುವ ಮೆಷಿನ್‍ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಜೂ.17 ಶನಿವಾರ ಬೆಳಿಗ್ಗೆ 8.30ಕ್ಕೆ ಮೇಳದಲ್ಲಿ ತೆರೆಯುವ ಮಳಿಗೆಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉದ್ಘಾಟಿಸಲಿದ್ದಾರೆ ಜೂ.18 ಭಾನುವಾರ ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜೇಸಿಐ ಅಧ್ಯಕ್ಷ ಸುಹಾಸ್ ಮರಿಕೆ, ನವನೀತ್ ಫಾರ್ಮ್ ನರ್ಸರಿಯ ವೇಣುಗೋಪಾಲ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.