ಪುತ್ತೂರು: ಮುಖ್ಯ ರಸ್ತೆಗೆ ಬಿದ್ದ ಮಾವಿನ ಮರ: ಸಾರ್ವಜನಿಕರು, ವಾಹನ ಚಾಲಕರು ಪಾರು

ಪುತ್ತೂರು: ಬೊಳುವಾರಿನಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದು ಸಾರ್ವಜನಿಕರು, ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಮೆ ಶಾಸಕರುಭೇಟಿ ನೀಡಿ ಪರಿಶೀಲನೆ ನಡೆಸಿದು, ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.




ಮಧ್ಯಮ ಗಾತ್ರದ ಮಾವಿನ ಮರ ರಸ್ತೆಗೆ ಮುರಿದು ಬಿದ್ದಿತ್ತು. ಸಾರ್ವಜನಿಕರು, ವಾಹನಗಳು ರಸ್ತೆಯಲ್ಲಿ ಸಂಚರಿಸುತಿದ್ದರೂ ಯಾವುದೇ ಅಪಾಯ ಉಂಟಾಗಿಲ್ಲ. ಮಾವಿನ ಮರ ಬಿದ್ದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕೆಲವರು ಮಾವನ್ನು ಕೊಂಡೊಯ್ದ ಘಟನೆಯೂ ನಡೆಯಿತು. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ಮರವನ್ನು ತೆರವು ಮಾಡಿಸಿದ್ದಾರೆ.