ಅಪಘಾತಗೊಂಡ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(27) ಮೃತಪಟ್ಟ ಯುವಕ.

ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಅವರು ಕಳೆದ ಫೆ. 29ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Related Posts

Leave a Reply

Your email address will not be published.