ಪುತ್ತೂರಿನ ಪಂಜಳದಲ್ಲಿ ಶಿಫ್ಟ್, ಓಮ್ನಿ ಭೀಕರ ಅಪಘಾತ
ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಹಾಗು ಸಿಬ್ಬಂದಿಗಳು ತನಿಖೆ ನಡೆಸಿ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.