ಪುತ್ತೂರು : ಅಕ್ಷಯ ಕಾಲೇಜಿನಲ್ಲಿ “ಯಕ್ಷಸಿಂಚನ”- ಯಕ್ಷಗಾನ ಕಲಾ ಸಂಘ ಉದ್ಘಾಟನೆ

ಪುತ್ತೂರು : ಅಕ್ಷಯ ಕಾಲೇಜಿನ ಯಕ್ಷಗಾನ ಕಲಾ ಸಂಘ ಯಕ್ಷಸಿಂಚನ ಉದ್ಘಾಟನೆಗೊಂಡಿತು, ಉದ್ಘಾಟಕರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಖ್ಯಾತ ಭಾಗವತರು ಹನುಮಗಿರಿ ಯಕ್ಷಗಾನ ಮೇಳ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು.

ಗೆಜ್ಜೆಗಿರಿ ಮೇಳದ ಪ್ರಧಾನ ಭಾಗವತರಾದ ಗಿರೀಶ್ ರೈ ಕಕ್ಕೆಪದವು ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಖ್ಯಾತ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಮತ್ತು ಗಿರೀಶ್ ರೈ ಕಕ್ಕೆಪದವು ಅವರು ತಮ್ಮ ಸುಮಧುರ ಕಂಠದಿಂದ ಭಾಗವತಿಕೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀ ಜಯಂತ ನಡುಬೈಲು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ ಪಕ್ಕಳ ಹಾಗೂ ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು. ಯಕ್ಷಗಾನ ಕಲಾ ಸಂಘದ ಸಂಚಾಲಕರಾದ ಶ್ರೀಮತಿ ಪ್ರಭಾವತಿ ಕೆ ಇವರು ಸ್ವಾಗತಿಸಿದರು. ಹಾಗೂ ಕಾರ್ಯದರ್ಶಿಯಾದ ಕೀರ್ತನ್ ಮತ್ತು ನರೇಂದ್ರ ರವರು ಯಕ್ಷಗಾನ ನಾಟ್ಯ ಪ್ರಾತ್ಯಕ್ಷತೆ ನೀಡಿದರು. ಜೊತೆ ಕಾರ್ಯದರ್ಶಿ ಭವ್ಯಶ್ರೀ ಧನ್ಯವಾದ ಸಮರ್ಪಿಸಿದರು, ನವಮಿಯವರು ಪ್ರಾರ್ಥಿಸಿ, ರೋಹಿತ್ ಕುಮಾರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related Posts

Leave a Reply

Your email address will not be published.