HomeFresh Newsಪುತ್ತೂರು: ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಲೋಕಾರ್ಪಣೆ

ಪುತ್ತೂರು: ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ  ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು  ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು  ಲೋಕಾರ್ಪಣೆ ಮಾಡಿದರು.

ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದ ಅಮಿತ್ ಶಾ ಅವರು ನಂತರ ಸಂದರ್ಶಕರ ಪುಸ್ತಕದಲ್ಲಿ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ ಮಾಡಿದರು. ಇಲ್ಲಿನ ಪ್ರಸಿದ್ಧ ಆಂಜನೇಯ ಕ್ಷೇತ್ರಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು ದೇಗುಲಕ್ಕೆ ನವರತ್ನಯುಕ್ತ ಬೆಳ್ಳಿಯ ಗದೆಯನ್ನು ಸಮರ್ಪಣೆ ಮಾಡಿದರು. ದೇಗುಲದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ ಅವರಿಗೆ ಅರ್ಚಕರು ರಕ್ಷೆಯನ್ನು ಕಟ್ಟಿದರು.

ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಮಂತ್ರಿ ಬಸವರಾಜ  ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ನಳೀನ್ ಕುಮಾರ್ ಧರ್ಮಶ್ರೀ ಪ್ರತಿಷ್ಠಾನ ಪ್ರತಿಷ್ಠಾನದ ಪ್ರಮುಖರು ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments