ಪುತ್ತೂರು : ಗಾಯಾಳುವಿನ ಕಿವಿಯ ತಮಟೆಗೆ ಹಾನಿ, ಡಿವೈಎಸ್ಪಿ ಅಮಾನತಿಗೆ ಪುತ್ತಿಲ ಆಗ್ರಹ
ಪುತ್ತೂರಿನಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಾಳು ಅವಿನಾಶನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದ.ಕ ಜಿಲ್ಲಾ ಎಸ್ಪಿಯವರನ್ನು ಭೇಟಿಯಾಗಿದ್ದಾರೆ.
ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ವೇಳೆ ಕಿವಿ ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿ ಬಂದಿತ್ತು ಎನ್ನಲಾಗಿದೆ. ಕೂಡಲೇ ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ ಎರಡು ದಿನದಲ್ಲಿ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸಕಾರತ್ಮಕ ಸ್ಪಂದನೆ ಸಿಗದೇ ಇದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಪುತ್ತಿಲ ಎಚ್ಚರಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಬ್ಯಾನರಿಗೆ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 9 ಮಂದಿಯನ್ನು ಪೆÇಲೀಸರು ಬಂಧಿಸಿದ್ದರು. ವಿಚಾರಣಾ ವೇಳೆ ಆರೋಪಿಗಳ ಮೇಲೆ ಪೋಲೀಸರು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಒತ್ತಾಯಕ್ಕೆ ಮಣಿದು ಎಸ್‍ಐ ಮತ್ತು ಪೆÇಲೀಸ್ ಕಾನ್ ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಡಿವೈಎಸ್ಪಿಯವರನ್ನು ಅಮಾನತುಗೊಳಿಸಬೇಕೆಂಬ ಆಗ್ರಹ ಎಲ್ಲಡೆಯಿಂದ ವ್ಯಾಪಕವಾಗಿ ಕೇಳಿ ಬರುತ್ತಿದೆ.