ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ನಾಗೇಶ್ ಟಿ.ಎಸ್, ಮಚ್ಚಿಮಲೆ ವಿರೂಪಾಕ್ಷ ಭಟ್ ನೇಮಕ
ಪುತ್ತೂರು:ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತಿಬ್ಬರಿಗೆ ಅವಕಾಶ ನೀಡಲಾಗಿದೆ. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಟಿ.ಎಸ್ ಮತ್ತು ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿರುವ ಮಚ್ಚಿಮಲೆ ವಿರೂಪಾಕ್ಷ ಭಟ್ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ನೇಮಕ ಮಾಡಿದ್ದಾರೆ.

ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿದ್ದ ಸುನಿಲ್ ದಡ್ಡು ಅವರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.ಉಳಿದಂತೆ ಹರಿಪ್ರಸಾದ್ ಯಾದವ್, ಯತೀಂದ್ರ ಕೊಚ್ಚಿ, ದಿವ್ಯ,ಕುಮಾರಸುಬ್ರಹ್ಮಣ್ಯ ಭಟ್, ವಿದ್ಯಾಧರ್ ಜೈನ್ ಅವರು ಮಂಡಲದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಡುವೆ ಇದೀಗ ಹೊಸ ಬೆಳವಣಿಗೆಯಾಗಿ, ಒಂದು ಉಪಾಧ್ಯಕ್ಷ ಸ್ಥಾನ ಖಾಲಿ ಇದ್ದರೂ ಇಬ್ಬರು ಉಪಾಧ್ಯಕ್ಷರನ್ನು ನಿಯುಕ್ತಿಗೊಳಿಸಲಾಗಿದೆ.


















