ಪುತ್ತೂರು:ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರಿನಲ್ಲಿಆರ್‌ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್,ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ದೂರಿನ ಅನ್ವಯ ಅಪರಾಧ ಕ್ರಮಾಂಕ 118/2025, 3 (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.25ರಂದು ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

Related Posts

Leave a Reply

Your email address will not be published.