ಪುತ್ತೂರು : ಮಾರ್ಚ್ 3ರಂದು ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಆರಂಭ-2024 ಕಾರ್ಯಕ್ರಮ

ಪುತ್ತೂರಿನ ಎವಿಜಿ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಘಟಕವಾಗಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಆರಂಭ-೨೦೨೪ ಕಾರ್ಯಕ್ರಮವು ಮಾರ್ಚ್ 3ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.
ಎವಿಜಿ ಆಂಗ್ಲಮಾಧ್ಯಮ ಶಾಲೆ ಬನ್ನೂರಿನ ಅಧ್ಯಕ್ಷರಾಗಿರುವ ವೆಂಕಟ್ರಮಣ ಗೌಡ ಕಳುವಾಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಒಉತ್ತೂರು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸುಳ್ಯ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ, ಎವಿಜಿ ಆಂಗ್ಲ ಮಾಧ್ಯಮ ಶಾಲೆ ಬನ್ನೂರಿನ ಸಂಚಾಲಕರಾದ ಎ.ವಿ.ನಾರಾಯಣ, ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷರಾದ ಉಮೇಶ್ ಮಳುವೇಲು ಉಪಸ್ಥಿತರಿರುವರು.
ಪ್ರಗತಿ ಪ್ರೌಢಶಾಲೆ ಕಾಣಿಯೂರಿನ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಗುವುದು.

ಕಾರ್ಯಕ್ರಮದ ನಂತರ ಸಹಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿಸುವ ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕರು, ಶಿಕ್ಷಕ ರಕ್ಷಕ ಸಂಘ, ವಿದ್ಯಾರ್ಥಿಗಳು.

Related Posts

Leave a Reply

Your email address will not be published.