ಪುತ್ತೂರು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಶಾಲೆ ದ್ವಿತೀಯ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ.

ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ತಂಡಕ್ಕೆ ದೈಹಿಕ ಶಿಕ್ಷಕರಾದ ಶ್ರೀಯುತ ನಿರಂಜನ್ ಹಾಗೂ ಅಕ್ಷಯ್ ಇವರು ತರಬೇತಿಯನ್ನು ನೀಡಿರುತ್ತಾರೆ.. ತಂಡದ ವ್ಯವಸ್ಥಾಪಕಿ ಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ರವರು ತಿಳಿಸಿರುತ್ತಾರೆ.

Related Posts

Leave a Reply

Your email address will not be published.