ಪುತ್ತೂರಿನ ಹೊರವಲಯದ ಪೋಳ್ಯ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ.ಆರೋಪಿಯ ಬಂಧನ.

ಪುತ್ತೂರು: ಮಾದಕ ದ್ರವ್ಯ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ನಡೆದಿದೆ.

ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕಬಕ ಗ್ರಾಮದ ಪೋಳ್ಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತ ಸಾರ್ವಜನಿಕರನ್ನು ಉದ್ದೇಶಿಸಿ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿರುವುದಾಗಿ ಬಂದ ಮಾಹಿತಿ ಪ್ರಕಾರ ಅಲ್ಲಿಗೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ಮಾದಕ ವಸ್ತು ಸೇವಿಸಿದ ಕುರಿತು ಸಂಶಯದ ಮೇರೆಗೆ ಆತನನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದಾಗ ಆತ ಗಾಂಜಾ ಸೇವಿಸಿರುವ ಕುರಿತು ವೈದ್ಯಾಧಿಕಾರಿಗಳು ದೃಢಪತ್ರ ನೀಡಿದ್ದರು. ಹಾಗಾಗಿ ಆರೋಪಿ ಉಮ್ಮರ್ ಫಾರೂಖ್ ಅವರ ವಿರುದ್ದ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

fathermuller

Related Posts

Leave a Reply

Your email address will not be published.