ಪುತ್ತೂರು: ಬಿಜೆಪಿಯಿಂದ ಗ್ರಾಮ ಚಲೋ ಕಾರ್ಯಾಗಾರ

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ದೊಡ್ಡ ಪ್ರಮಾಣದಲ್ಲಿ ಮುನ್ನಡೆ ಒದಗಿಸಿಕೊಡುವ ಭರವಸೆಯನ್ನು ಪುತ್ತೂರು ಕ್ಷೇತ್ರದ ಎಲ್ಲಾ ಕಾರ್ಯಕರ್ತರು ನೀಡಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದೆ ಗೆಲ್ಲುತ್ತೇವೆ. ಮರಳಿ ಪ್ರಧಾನಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ಬಿಜೆಪಿ ಪುತ್ತೂರು ಮಂಡಲದ ವತಿಯಿಂದ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆದ ಗ್ರಾಮ ಚಲೋ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು.ಪುತ್ತೂರಿನಲ್ಲಿ ಅಧ್ಯಕ್ಷರ ಘೋಷಣೆ ಆಗಿಲ್ಲ, ಕ್ಷೇತ್ರಮಟ್ಟದ ತಂಡ ಘೋಷಣೆ ಆಗಿಲ್ಲ ಎಂದು ಕಾಐಕರ್ತರ ಮನಸ್ಸಿನಲ್ಲಿ ಇರಬಹುದು. ಆದರೆ ರಾಜ್ಯದಲ್ಲಿ 10 ಕಡೆ ಜಿಲ್ಲಾಧ್ಯಕ್ಷರನ್ನೇ ಘೋಷಣೆ ಮಾಡಿ ಆಗಿಲ್ಲ. ಈಗಿರುವ ತಂಡವೇ ಅಲ್ಲಿ ಕೆಲಸ ಮಾಡುತ್ತಿದೆ. ಪುತ್ತೂರಿನಲ್ಲೂ ಇದ್ದಂತಹ ತಂಡವೇ ಕೆಲಸ ಮಾಡಬೇಕೆಂದು ರಾಜ್ಯ ನಾಯಕರ ಅಪೇಕ್ಷೆಯಂತೆ ತಂಡವನ್ನು ಮುಂದುವರಿಸಿದ್ದಾರೆ ಹೊರತು ಬೇರೆ ಯಾವುದೇ ಕಾರಣಕ್ಕೂ ಹೊಸ ಸಮಿತಿ ಘೋಷಣೆ ಮಾಡದೆ ಇರುವುದಲ್ಲ ಎಂದರು.

ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತು ಪುತ್ತೂರು ಉಸ್ತುವಾರಿಯಾಗಿರುವ ಪ್ರೇಮಾನಂದ್, ಜಿಲ್ಲೆಯ ಉಪಾಧ್ಯಕ್ಷರಾಗಿರು ಪುತ್ತೂರು ಮಂಡಲದ ಪ್ರಭಾರಿ ಸುನಿಲ್ ಆಳ್ವ, ಜಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರುವಾರು, ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.

Nippon

Related Posts

Leave a Reply

Your email address will not be published.