ಪುತ್ತೂರು: ಜ.12ರಂದು ಪುತ್ತೂರಿನಲ್ಲಿ ವಿವೇಕಾನಂದ ಜಯಂತಿ ಆಚರಣೆ
ಪುತ್ತೂರು: ಪ್ರತೀ ವರ್ಷದಂತೆ ಈ ವರ್ಷವೂ ಜ. 12 ರಂದು ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂಬ ಪರಿಕಲ್ಪನೆಯೊಂದಿಗೆ ಬಾರಿಯ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ ಯಂ ಕೃಷ್ಣ ಭಟ್ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ ಪ್ರಭಾಕರ್. ಭಟ್ ಕಲ್ಲಡ್ಕ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಅಂಕಣಗಾರ ಪ್ರಕಾಶ್ ಮಲ್ಪೆ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.