ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ

ಪುತ್ತೂರು: ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು ಅದಕ್ಕೆ ಪ್ರತೀ ಬೂತ್‍ನಿಂದ ಇಬ್ಬರು ಭಾಗವಹಿಸಬೇಕು, ಮುಂದಿನ ದಿನಗಳಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು.

ಅವರು ಪುತ್ತೂರು ಅಮರ್ ಕಾಂಪ್ಲೆಕ್ಸ್‍ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಬ್ರಾಹಿಂ ಗೋಳಿಕಟ್ಟೆ ಮಾತನಾಡಿ ಬಿಜೆಪಿ ಬೆಳೆಯಲು ಕಾಂಗ್ರೆಸ್ ಕಾರಣ ಎಂದು ಹೇಳಿದರು. ನಮ್ಮ ಪಕ್ಷದ ಕುಮಾರಸ್ವಾಮಿಯವರು ಹೋದ ಕಡೆಯೆಲ್ಲಾ ಜನರಿಂದ ಅಭೂತಪೂರ್ವ ಬೆಂಬಲ ದೊರಕುತ್ತಿದ್ದು ಅವರೇ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ. ಇಲ್ಲಿ ಯಾರು ಅಭ್ಯರ್ಥಿ ಆದರೂ ನಾವು ದುಡಿಯಬೇಕು ಎಂದು ಅವರು ಹೇಳಿದರು.

ಇದೆ ಸಂದರ್ಭದಲ್ಲಿ ಜೆಡಿಎಸ್ ಪುತ್ತೂರು ವಿಧಾನಸಭಾ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಮಹಾವೀರ್ ಜೈನ್ ಹಾಗೂ ಪುತ್ತೂರು ನಗರ ಅಧ್ಯಕ್ಷರಾಗಿ ವಿಕ್ಟರ್ ಗೋನ್ಸಾಲಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಜೆಡಿಎಸ್ ಪುತ್ತೂರು ವಿಧಾನಸಬಾ ಕ್ಷೇತ್ರದ ಮಾಜಿ ಅಧ್ಯಕ್ಷ ಐ.ಸಿ ಕೈಲಾಸ್, ಜೆಡಿಎಸ್ ಹಿರಿಯ ಮುಖಂಡ ಗದಾಧರ್ ಮಲ್ಲಾರ್,ಪುತ್ತೂರು ನಗರಸಭೆಯ ಮಾಜಿ ಸದಸ್ಯೆ, ಜೆಡಿಎಸ್ ಮುಖಂಡರಾದ ಝೊಹರಾ ನಿಸಾರ್,ಜೆಡಿಎಸ್ ದ.ಕ ಜಿಲ್ಲಾ ಕಾರ್ಯಾಧ್ಯಕ್ಷ ನಝೀರ್ ಉಳ್ಳಾಲ,ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಶಾಝಮೀರ್ ಖಾನ್,ಜೆಡಿಎಸ್ ದ.ಕ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಮೀಝಾ ಬಾನು, ಜೆಡಿಎಸ್ ಪುತ್ತೂರು ಮಹಿಳಾ ಘಟಕದ ಅಧ್ಯಕ್ಷೆ ಪದ್ಮಮಣಿ, ಜೆಡಿಎಸ್ ಜಿಲ್ಲಾ ಮುಖಂಡೆ ಝೋಹರಾ ಉಳ್ಳಾಲ, ಮಹಿಳಾ ಘಟಕದ ಜಿಲ್ಲಾ ಪ್ರ.ಕಾರ್ಯದರ್ಶಿ ಪ್ರಿಯಾ ಸಾಲ್ಯಾನ್, ಯುವಜನತಾ ದಳ ಪುತ್ತೂರು ತಾಲೂಕು ಅಧ್ಯಕ್ಷ ಶಿವ ಸಾಲ್ಯಾನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.