ಪುತ್ತೂರಿನ ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ವ್ಯಕ್ತಿಯ ಅಸಭ್ಯ ವರ್ತನೆ : ದೇವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.ಅವರು ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದರು.

ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ಯಾರೋ ವ್ಯಕ್ತಿ ಅಸಭ್ಯ ವರ್ತನೆ ಮಾಡಿದ್ದಾನೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿ ಫೆÇೀಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ. ಕಂಬಳ ಸಮಿತಿಯನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸುವ ಯತ್ನ ಮಾಡಲಾಗುತ್ತಿದೆ. ನಮಗೆ ಮಹಾಲಿಂಗೇಶ್ವರ ಸಾನಿಧ್ಯವೇ ನ್ಯಾಯಾಲಯ. ದೇವರು ನಮಗೆ ನ್ಯಾಯ ನೀಡಬೇಕು ಎಂದು ಪ್ರಾರ್ಥಿಸಿದರು.
ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾರ್ಥನೆ ಮಾಡಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಂಬಳ ಸಮಿತಿಯ ಪ್ರಮುಖರಾದ ದಿನೇಶ್ ಕುಲಾಲ್ ಪಿ.ವಿ., ಪಂಜಿಗುಡ್ಡೆ ಈಶ್ವರ ಭಟ್, ನಿರಂಜನ ರೈ ಮಠಂತಬೆಟ್ಟು, ಶಿವರಾಮ ಆಳ್ವಾ, ಭಾಗ್ಯೆಶ್ ರೈ, ಕೃಷ್ಣಪ್ರಸಾದ್ ಆಳ್ವ,ದುರ್ಗಾಪ್ರಸಾದ್ ರೈ ಕುಂಬ್ರ, ಶಶಿಕಿರಣ್ ರೈ, ನವೀನ್ ಚಂದ್ರ ನಾಯ್ಕ್, ಕಂಪ ಸುಧಾಕರ ನಾಯ್ಕ್, ಜಯಪ್ರಕಾಶ್ ಬದಿನಾರು, ಧೀರಜ್ ಗೌಡ ಕೊಡಿಪ್ಪಾಡಿ, ಯತೀಶ್ ಶೆಟ್ಟಿ ಕೋಡಿಂಬಾಡಿ, ಪ್ರೇಮಾನಂದ ನಾಯ್ಕ್, ವಿಕ್ರಂ ಶೆಟ್ಟಿ ಕೋಡಿಂಬಾಡಿ, ಗಣೇಶ್‍ರಾಜ್ ಬಿಳಿಯೂರು, ಭಾಗ್ಯೇಶ್ ರೈ, ಯೋಗೀಶ್ ಮಠಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.