ಪುತ್ತೂರಿನಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ-2023

ಪುತ್ತೂರು : ಕ್ಯಾಂಪ್ಕೋ ಲಿಮಿಟೆಡ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ 5ನೇ ಬೃಹತ್ ಕೃಷಿ ಯಂತ್ರಮೇಳ ಮತ್ತು ಕನಸಿನ ಮನೆ ಉದ್ಘಾಟನಾ ಸಮಾರಂಭಕ್ಕೆ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕೃಷಿಯಂತ್ರ ಮೇಳವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ದೇಶದ ಜಿಡಿಪಿಯಲ್ಲಿ ಶೇ.18 ರಷ್ಟು ರೈತರ ಕೊಡುಗೆ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ತೆರದಿರುವ ಕೃಷಿಯಂತ್ರ ಬಾಡಿಗೆ ಕೇಂದ್ರಗಳಲ್ಲಿ ರೈತರಿಗೆ ನೀಡುವ ಕೃಷಿ ಸಲಕರಣೆಗಳಿಗೆ ಹೆಚ್ಚಿನ ಸಬ್ಸಿಡಿ ಜತೆಗೆ ಫ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಯನ್ನು ಸರಕಾರದ ವತಿಯಿಂದ ತಯಾರಿಸಲಾಗಿದೆ ಎಂದು ತಿಳಿಸಿದರು.

ಹಿಂದಿನಿಂದಲೂ ಕುಚ್ಚಿಲಕ್ಕಿಯನ್ನು ಬಳಸುತ್ತಿರುವ ದ.ಕ., ಉಡುಪಿ ಜಿಲ್ಲೆಯಲ್ಲಿ ಕುಚ್ಚಲಕ್ಕಿ ಬೆಳೆಯದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಹವಮಾನಕ್ಕನುಗುಣವಾಗಿ ಬೆಳೆಯುವ ಭತ್ತ ಹಣ್ಣುಗಳು ಹೀಗೆ ಸುಮಾರು 1500 ಜಾತಿಯನ್ನು ಹವಮಾನಾಧಾರಿತ ಬೆಳೆಗಳನ್ನು ಕಂಡು ಹಿಡಿಯಲಾಗಿದೆ. ಮೋದಿ ನೇತೃತ್ವದ ಕೇಂದ್ರ ಸರಕಾರ ಹೊಸ ಸಂಶೋಧನೆಗೆ ಹೆಚ್ಚಿನ ಅನುದಾನ, ಫ್ರೋತ್ಸಾಹ ನೀಡುವ ಕೆಲಸ ಕೇಂದ್ರ ಸರಕಾರ ಮಾಡುತ್ತಿದೆ ಎಂದರು.

ಒಂದೆಡೆ ಅಡಿಕೆಗೆ ರೋಗ ಬಾಧಿಸಿದ್ದು, ಇನ್ನೊಂದೆಡೆ ಅಡಿಕೆ ಹಾನಿಕಾರಕ ಎಂದು ಸುಪ್ರೀಂ ಕೊರ್ಟಿನಲ್ಲಿದೆ. ಈ ಕುರಿತು ಪ್ರಧಾನಮಂತ್ರಿ ಮೋದಿಯವರಲ್ಲಿ ಮನವಿ ಮಾಡಿಕೊಂಡಂತೆ ಅಡಕೆ ಹಾನಿಕಾರಕ ಅಲ್ಲ ಎಂಬುದನ್ನು ಸಾಬೀತು ಪಡಿಸಲು ಮೋದಿಯರು ಒಳ್ಳೆಯ ವಕೀಲರ ತಂಡವನ್ನು ನೇಮಿಸಿ ಅಡಿಕೆಯನ್ನು ರಕ್ಷಿಸುವತ್ತ ಹೊರಟಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು,ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್,ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ,ಕ್ಯಾಂಪ್ಕೋ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಎಂ.ಕೃಷ್ಷ ಕುಮಾರ್,ಕಾಸರಗೋಡು ಐಸಿಎಆರ್-ಸಿಪಿಸಿಆರ್‍ಐ ನಿರ್ದೇಶಕ ಡಾ.ಕೆ.ಬಿ.ಹೆಬ್ಬಾರ್,ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್,ಮಂಗಳೂರು ವಿವಿ ಉಪಕುಲಪತಿ ಡಾ.ಪಿ.ಎಸ್.ಸುಬ್ರಹ್ಮಣ್ಯ ಎಡಪಡಿತ್ತಾಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ಕ್ಯಾಂಪ್ಕೋ ಉಪಾಧ್ಯಕ್ಷ ಶಂಖರನಾರಾಯಣ ಖಂಡಿಗೆ ಉಪಸ್ಥಿತರಿದ್ದರು.
