ಪುತ್ತೂರು : ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲವರ್ಧನೆ ಮಾಡುವ ಬಗ್ಗೆ ಹಾಗೂ ಜನರ ಮೂಲಭೂತ ಸಮಸ್ಯೆಗಳಿಗೆ ಪ್ರಮುಖವಾಗಿ ಆದ್ಯತೆ ನೀಡಿ ಸ್ಪಂದಿಸಿ ಇನ್ನಷ್ಟು ಹತ್ತಿರವಾಗಬೇಕೆಂದು ಕರೆ ನೀಡಿದರು.
ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ ಅಧಿಕಾರದಲ್ಲಿರುವ ಪಕ್ಷಗಳು ಕಾರ್ಪೋರೆಟ್ ಕುಳಗಳನ್ನು ಮೆಚ್ಚಿಸುತ್ತಿವೆಯೇ ಹೊರತು ಜನರ ಪರವಾಗಿಲ್ಲ, ಇಲ್ಲಿರುವ ಮುಸ್ಲಿಮರನ್ನು ಹಾಗೂ ಹಿಂದುಳಿದ ವರ್ಗದವರನ್ನು ಬಿಜೆಪಿ ಕೋಮುವಾದದ ಹೆಸರಿನಲ್ಲಿ ದಾಳಿ ಮಾಡುತ್ತಿದೆ ಹಾಗೂ ತಾರತಮ್ಯ ಮಾಡುತ್ತಿದೆ ಮತ್ತು ಈ ಕಡೆ ಕಾಂಗ್ರೆಸ್ ದ್ರೋಹವನ್ನೇ ಬಗೆಯುತ್ತಿದೆ ಎಂದು ಹೇಳಿದರು.ವೇದಿಕೆಯಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರ.ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಸುಲೈಮಾನ್ ಬಿ.ಕೆ, ಕಾರ್ಯದರ್ಶಿ ಉಸ್ಮಾನ್ ಎ.ಕೆ ಉಪಸ್ಥಿತರಿದ್ದರು.ಪುತ್ತೂರು ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ರಹೀಂ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು
