ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ತರಬೇತಿ ನೀಡಿದ್ದಾರೆ.