HomeFresh Newsಪುತ್ತೂರು: ನಾಪತ್ತೆಯಾದ ಪುತ್ತೂರಿನ ವಿದ್ಯಾರ್ಥಿನಿ ಪತ್ತೆ

ಪುತ್ತೂರು: ನಾಪತ್ತೆಯಾದ ಪುತ್ತೂರಿನ ವಿದ್ಯಾರ್ಥಿನಿ ಪತ್ತೆ

ಪುತ್ತೂರು: ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ರೂಪ ಹಾಗೂ ಆಕೆಯ ಸಹೋದರ ಮಾತ್ರ ವಾಸವಿದ್ದರು. ಜು.1 ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ ರೂಪ ಮನೆಗೆ ಹಿಂತಿರುಗಿಲ್ಲವೆಂದು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸ್ನೇಹಿತರ ಮನೆಗೂ ತೆರಳದೆ, ಸಂಬಂಧಿಕರ ಮನೆಗೆ ಕೂಡ ಹೋಗದೆ ಯುವತಿ ನಾಪತ್ತೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು, ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments