ಪೊಲೀಸ್ ದೌರ್ಜನ್ಯ ಮಾಡಿಸಿದ್ದು ಯಾರೆಂದು ರಾಜ್ಯಕ್ಕೆ ಗೊತ್ತಿದೆ : ಶಾಸಕ ಅಶೋಕ್ ಕುಮಾರ್ ರೈ

ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ ಎಲ್ಲಾ ಇಲಾಖೆಗಳ ಬಗ್ಗೆ ತಿಳಿಯುವ ಪ್ರಯತ್ನ ಮಾಡುತ್ತೇನೆ. ಆಳವಾಗಿ ಸಾಧಕ-ಬಾಧಕಗಳನ್ನು ತಿಳಿಯುವ ಪ್ರಯತ್ನ ಮಾಡಲಾಗುವುದು ಎಂದರು.
