ಪುತ್ತೂರು : ಯುವತಿಗೆ ಚೂರಿ ಇರಿದು ಕೊಲೆ ಪ್ರಕರಣ, ಆರೋಪಿ ಉಮೇಶ್ ಎಂಬಾತನ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ 23ರ ಹರೆಯದ ಯುವತಿಯನ್ನು ಮನೆಯ ಅಂಗಳದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕನಕಮಜಲಿನ ಅಂಗಾರ ಎಂಬವರ ಪುತ್ರ ಉಮೇಶ್ ಎಂದು ಗುರುತಿಸಲಾಗಿದೆ.

ಉಮೇಶ್ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಬಿ.ಎಸ್.ಸಿ ಪದವೀಧರೆಯಾದ ಜಯಶ್ರೀ ಇತ್ತೀಚೆಗೆ ಅವನ ಗುಣ ನಡತೆ ಇಷ್ಟವಾಗದ ಕಾರಣ 2022ರ ನವೆಂಬರ್ ವೇಳೆಗೆ ಉಮೇಶನನ್ನು ದೂರ ಮಾಡಿದ್ದು, ಈ ಹಿನ್ನೆಲೆ ಕೋಪಗೊಂಡ ಉಮೇಶ್ ಆಕೆಯನ್ನು ಹತ್ಯೆ ಮಾಡಿದ್ದಾಗಿ ತನಿಖೆ ವೇಳೆ ತಿಳಿದು ಬಂದಿದೆ. ಜಯಶ್ರೀ ತಾಯಿ ಕೂಡ ಆತನೇ ಹತ್ಯೆ ಮಾಡಿರಬಹುದು ಎಂದು ಆರೋಪಿಸಿ ಗ್ರಾಮಾಂತರ ಪೆÇಲೀಸ್ ಠಾಣೆಗೆ ದೂರು ನೀಡಿದ್ದರು.

Related Posts

Leave a Reply

Your email address will not be published.