ಅರುಣ್ ಪುತ್ತಿಲ ಬಗ್ಗೆ ಅಪಾರ ಗೌರವವಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ರಾಜ್ಯದ ಕೆಲವು ಕಡೆಯಲ್ಲಿ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಎರಡು ಕಡೆಗಳಲ್ಲಿ ಇಂದು ನಾಮಪತ್ರ ಸಲ್ಲಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸಲಿದೆ. ಪುತ್ತೂರಿನ ಬಿಜೆಪಿ ಬಂಡಾಯದ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು ಅರುಣ್ ಕುಮಾರ್ ಪುತ್ತಿಲ ಮೇಲೆ ಅಪಾರ ಗೌರವವಿದೆ. ಸಂಘಟನೆಯಲ್ಲಿ ಗುರುತಿಸಿ,ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ. ಆ ಮೂಲಕ ಸ್ಪರ್ಧಿಸಿದ್ದು, ಬಿಜೆಪಿ ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಲಿದೆ ಎಂದರು.