HomeFresh Newsಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಯುವ ಪೊಲೀಸ್ ರನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡರು. ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಸಹಿತ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ ಉಪ ವಿಭಾಗ ಎಲ್ಲಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಮತ್ತು ವಿವೇಕಾನಂದ ಹಾಗು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಪೊಲೀಸ್ ರನ್ ಲ್ಲಿ ಪಾಲ್ಗೊಂಡರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments