ಪುತ್ತೂರು: ನಗರದ ಆರ್ಯಾಪು ಗ್ರಾಮ ಪಂಚಾಯತ್ ನ ಪ್ರಾ.ಕೃ.ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ ನಿಂದ ಪ್ರಶಸ್ತಿ ಪ್ರದಾನ

ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್‌. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕ‌ರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಡಾ :ಎಂ. ಎನ್. ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ನೀಡಿ ಶಾಲು, ಹೂಹಾರ ಹಾಕಿ, ಸನ್ಮಾನಿಸಿದರು.ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಜಿಲ್ಲೆಯ ಸಹಕಾರ ಇಲಾಖೆಯ ನಿಬಂಧಕರಾಗಿರುವ ರಮೇಶ್,ಹಾಗೂ ಲಾವಣ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶಶಿಕುಮಾ‌ರ್ ರೈ ಬಾಲ್ಗೊಟ್ಟು, ಎಸ್ ಬಿ ಜಯರಾಮ ರೈ, ಕುಶಾಲಪ್ಪ ಗೌಡ ಬೆಳ್ತಂಗಡಿ, ಮನ್ಮಥ ಸುಳ್ಯ, ಸದಾಶಿವ ಉಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

add - S.L Shet ..march 2025

Related Posts

Leave a Reply

Your email address will not be published.