HomeFresh Newsಪುತ್ತೂರು: ಶ್ರೀರಾಮನ ವಿಗ್ರಹ ಪ್ರಾಣಪ್ರತಿಷ್ಠೆಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಿ

ಪುತ್ತೂರು: ಶ್ರೀರಾಮನ ವಿಗ್ರಹ ಪ್ರಾಣಪ್ರತಿಷ್ಠೆಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಿ

ಪುತ್ತೂರು: ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆಯು ಮಧ್ಯಾಹ್ನ 12.20 ರ ಶುಭಮುಹೂರ್ತದಲ್ಲಿ ನೆರವೇರಲಿದೆ. ಇಂತಹ ಅಪೂರ್ವ ಹಾಗೂ ಪವಿತ್ರ ಸಂದರ್ಭದಲ್ಲಿ ಪೂರ್ವಾಹ್ನ 11 ಗಂಟೆಯಿಂದ 1.30 ಗಂಟೆಯವರೆಗೆ ಎಲ್ಲಾ ಹಿಂದೂಗಳು ತಮ್ಮ ವ್ಯವಹಾರ, ವಹಿವಾಟುಗಳಿಗೆ ಬಿಡುವು ನೀಡಿ ಸ್ಥಳೀಯ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕ್ಷತೆ ವಿತರಣೆಯ ಜಿಲ್ಲಾ ಸಂಯೋಜಕರಾದ ವಿಹಿಂಪ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಹಾಗೂ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ವಿಭಾಗ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ ಹಿಂದೂಗಳಿಗೆ ಆದರ್ಶಪ್ರಾಯರಾದ ಶ್ರೀರಾಮನ ಪ್ರತಿಷ್ಠೆಯನ್ನು ಅತ್ಯಂತ ಸಂತೋಷದಿಂದ ಸಂಭ್ರಮಿಸೋಣ ಎಂದರು.
ಭಗವಧ್ವಜವನ್ನು ಹಾರಿಸಿ, ಎಲ್ಲರೂ ತಮ್ಮ ಮನೆಗಳಲ್ಲಿ, ಅಂಗಡಿಗಳಲ್ಲಿ ವಾಹನಗಳಲ್ಲಿ ಹಾಗೂ ಕಚೇರಿಗಳಲ್ಲಿ ಅಂದು ಬೆಳಗ್ಗಿನಿಂದಲೇ ಭಗವಧ್ವಜವನ್ನು ಹಾರಿಸಬೇಕು ಮತ್ತು ಶ್ರೀರಾಮ ಭಾವಚಿತ್ರವನ್ನಿರಿಸಿ ಪೂಜಿಸಬೇಕು ಎಂದು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments