ವೈದ್ಯ ಡಾ. ಕೃಷ್ಣಮೂರ್ತಿ ಸಂರ್ಪಂಗಳ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹಿಸಿ ವಿಹಿಂಪ ನೇತೃತ್ವದಲ್ಲಿ ಪ್ರತಿಭಟನೆ

ಪುತ್ತೂರು : ಮೂಲತ: ಪುತ್ತೂರಿನವರಾದ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸೂಕ್ತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಸಂಜೆ ಪುತ್ತೂರು ನಗರದ ಅಮರ ಜವಾನ್ ಜ್ಯೋತಿ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ 100ಕ್ಕೂ ಅಧಿಕ ವೈದ್ಯರು ಪಾಲ್ಗೊಂಡರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಅವರು, ಜಾತಿ-ಮತ, ಧರ್ಮ ಬೇಧ ನೋಡದೆ ಇಡೀ ಸಮಾಜಕ್ಕೆ ವೈದ್ಯಕೀಯ ಸೇವೆ ನೀಡಿ ಸಮಾಜದಲ್ಲಿ ಗುರುತಿಸಿಕೊಂಡಿದ್ದ ಸಜ್ಜನ,ಸಹೃದಯಿ ವೈದ್ಯರಾದ ಡಾ,ಕೃಷ್ಣಮೂರ್ತಿ ಅವರನ್ನು ಜಿಹಾದಿ ಮಾನಸಿಕತೆಯ ವ್ಯಕ್ತಿಗಳು ಹತ್ಯೆ ಮಾಡಿ, ಹತ್ಯೆಯನ್ನು ಆತ್ಮಹತ್ಯೆ ಎಂದು ಬಿಂಬಿಸುವ ಕೆಲಸಗಳಾಗುತ್ತಿದೆ ಎಂದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ವೈದ್ಯ ಡಾ. ಸುರೇಶ್ ಪುತ್ತೂರಾಯ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ವಿಶ್ವಹಿಂದೂ ಪರಿಷತ್ ನಗರ ಪ್ರಖಂಡ ಅಧ್ಯಕ್ಷ ಜನಾರ್ಧನ ಬೆಟ್ಟ, ಐಎಂಎ ಮುಖಂಡ ಡಾ. ಗಣೇಶ್ ಪ್ರಸಾದ್ ಮುದ್ರಾಜೆ,
ಮತ್ತಿತರರು ಪಾಲ್ಗೊಂಡಿದ್ದರು.
