ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದೆ. ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್‍ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕ ಆಶೋಕ್ ಕುಮಾರ್ ರೈ ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪುತ್ತೂರಿಗೆ ಉಪವಿಭಾಗಕ್ಕೆ ಎಸ್‍ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ ಎಸ್‍ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ.

ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ.

ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

Related Posts

Leave a Reply

Your email address will not be published.