ಪುತ್ತೂರು: ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ: ಇಬ್ಬರ ಬಂಧನ

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ವರ್ಷ) ಮತ್ತು ಜಯ(38 ವರ್ಷ) ರವರನ್ನು ಅರಣ್ಯ ಇಲಾಖೆ ಅಧಿಕಾರಿ ಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವು ಸತ್ತಿರಿತ್ತದೆ. ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ಙ ಏ ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗಿ P ಕಾರ್ಯಪ್ಪ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ S .ಓ ಅರಣ್ಯ ರಕ್ಷಕರುಗಳಾದ ದೀಪಕ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.

Related Posts

Leave a Reply

Your email address will not be published.