ಪುತ್ತೂರು: ನಗರಸಭೆ ವ್ಯಾಪ್ತಿಯ ರಾಜಕಾಲುವೆ, ಚರಂಡಿ ಹೂಳೆತ್ತುವ ಕಾಮಗಾರಿಯಲ್ಲಿ ಅವ್ಯವಹಾರ: ಲೋಕಾಯುಕ್ತದಿಂದ ತನಿಖೆಗೆ ಆದೇಶ
ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ರಾಜಕಾಲುವೆ, ಚರಂಡಿ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ.ತನಿಖೆ ನಡೆಸುವಂತೆ ಲೋಕಾಯುಕ್ತರಿಂದ ಆದೇಶ.
ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಈ ಕುರಿತು ನಗರಸಭೆ ಹಿಂದಿನ ಪೌರಾಯುಕ್ತೆ ರೂಪಾ ಶೆಟ್ಟಿ, ಇಂಜಿನಿಯರ್ ದಿವಾಕರ್ ಹಾಗೂ ಅಕೌಂಟೆಂಟ್ ಚಂದ್ರರಾಮ ದೇವಾಡಿಗ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ತನಿಖೆಗೆ ಲೋಕಾಯುಕ್ತರಿಂದ ಆದೇಶಿಸಲಾಗಿದೆ ಎಂದು ನಗರಸಭೆ ಮಾಜಿ ವಿಪಕ್ಷ ನಾಯಕ ಮಹಮ್ಮದಾಲಿ ತಿಳಿಸಿದ್ದಾರೆ.
ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2018-19 ಹಾಗೂ 2020-21 ರಲ್ಲಿ ನಗರಸಭೆ ವ್ಯಾಪ್ತಿಯಲ್ಲಿನ ರಸ್ತೆ ಬದಿಗಳಲ್ಲಿರುವ ಚರಂಡಿ ಹಾಗೂ ರಾಜಕಾಲುವೆಗಳ ಹೂಳೆತ್ತುವ ಕಾರ್ಯಕ್ಕೆ ಟೆಂಡರ್ ಕರೆದು ಸ್ಥಳೀಯರೊಬ್ಬರಿಗೆ ಗುತ್ತಿಗೆ ನೀಡಲಾಗಿತ್ತು. ಆದರೆ ಕಾಮಗಾರಿ ನಡೆದಿಲ್ಲ ಎಂದು ಕೆಲವೊಂದು ವಾರ್ಡುಗಳ ಸದಸ್ಯರಿಂದ ದೂರುಗಳು ಕೇಳಿ ಬಂದಿತ್ತು. ಕಾಮಗಾರಿಯನ್ನು ಜೆಸಿಬಿಯಿಂದ ಮಾಡಲಾಗಿರುವುದಕ್ಕೆ ಫೆÇೀಟೊಗಳು ನನಗೆ ಲಭಿಸಿದೆ. ಆದರೆ ಹೂಳೆತ್ತುವ ಕಾಮಗಾರಿಯ ಅಂದಾಜುಪಟ್ಟಿ, ಬಿಲ್ಲು ಪ್ರತಿ, ಎಂಬಿ ಪುಸ್ತಕಗಳ ಪ್ರತಿ ಸಹಿತ ಫೆÇೀಟೊಗಳನ್ನು ಪಡೆದುಕೊಂಡು ಪರಿಶೀಲಿಸಿದಾಗ ವ್ಯಾಪಕ ಅವ್ಯವಹಾರ ನಡೆದಿರುವುದು ಕಂಡು ಬಂದಿದೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಟಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಕಾಂಗ್ರೆಸ್ ನ ರಿಯಾಝ್, ಮಂಜುನಾಥ, ಮೌರಿಸ್ ಕುಟಿನ್ಹ ಉಪಸ್ಥಿತರಿದ್ದರು.