ಪುತ್ತೂರು ಗ್ರಾ.ಪಂ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರ ಜಯಭೇರಿ

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‍ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ.

ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ರುಕ್ಮಾ ನಾಯ್ಕ ರವರ ಅಕಾಲಿಕ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಈ ಬಾರಿ ಮಾತ್ರ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಮೂಲಕ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ.

ಕ್ಷೇತ್ರದ ಮತಗಳ ವಿವರ :
ಸುಬ್ರಹ್ಮಣ್ಯ ಬಲ್ಯಾಯ-499.
ಪುರುಷೋತ್ತಮ ಪ್ರಭು-353
ಜಗದೀಶ ಭಂಡಾರಿ-140.
ತಿರಸ್ಕ್ರತ-7.

ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲರವರು ಕೂಡ ಈ ವಾರ್ಡ್ ನಲ್ಲಿ 499 ಮತಗಳನ್ನು ಪಡೆದಿದ್ದರು ಎಂದು ತಿಳಿದು ಬಂದಿದೆ. ಇಂದಿನ ಫಲಿತಾಂಶ ಬಹುತೇಕ ಕಳೆದ ವಿಧಾನಸಭೆಯ ಫಲಿತಾಂಶ ಪುನಾರವರ್ತನೆಯಂತೆ ಕಂಡು ಬಂದಿದೆ.

Related Posts

Leave a Reply

Your email address will not be published.