ಪುತ್ತೂರು : ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಬಾವಿ

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ.

ಬಾವಿ ಕುಸಿದ ಹಿನ್ನಲೆಯಲ್ಲಿ ಹೊಸ ಮನೆಯೂ ಕುಸಿಯುವ ಅಪಾಯದಲ್ಲಿದೆ. ಬಪ್ಪಳಿಕೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಾಗಿದ್ದು, ಭೂ ಕುಸಿತದಿಂದಾಗಿ ಪರಿಸರದ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕ ದಳ ದವರು ಮನೆ ಮಂದಿಯನ್ನು ರಕ್ಷಿಸಿದ್ದು, ಬೇರೆಡೆಗೆ ಸ್ಥಳಾಂತರಿಸಲಾಗಿದೆ.ಮನೆ ಸುತ್ತಲೂ ತಾತ್ಕಾಲಿಕ ತಡೆ ಹಾಕಲಾಗಿದ್ದು, ಸ್ಥಳಕ್ಕೆ ನಗರಸಭಾ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
