ಕ್ಯಾಮರಾ ಮುಂದೆ ಬಾವುಕರಾಗಿ ಕಣ್ಣೀರಿಟ್ಟ ರಘುಪತಿ ಭಟ್

ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ತಪ್ಪುತ್ತಲೇ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ. ಅಭಿಮಾನಿಗಳನ್ನು ಕಂಡು ರಘುಪತಿ ಭಟ್ ಭಾವುಕರಾಗಿದ್ದಾರೆ. ನಾನು ಶಾಕ್ ನಲ್ಲಿದ್ದೇನೆ ಏನು ಹೇಳುವ ಸ್ಥಿತಿಯಲಿಲ್ಲ ಎಂದು ರಘುಪತಿ ಭಟ್ ಹೇಳಿದ್ದರು. ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಠ ಜಿಲ್ಲಾ ಮಟ್ಟದ ನಾಯಕರು ಕೂಡ ಕರೆ ಮಾಡಿ ಮಾತನಾಡಿಲ್ಲ. ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ ಅನ್ನೋದು ಖಚಿತವಾಗಿದೆ. ಈ ಬಾರಿ ನಿನಗೆ ಟಿಕೆಟ್ ಇಲ್ಲ ಎಂದು ಮೊದಲೇ ಹೇಳಿದ್ದರೆ ಮಾನಸಿಕವಾಗಿ ಸಿದ್ಧನಾಗುತ್ತಿದ್ದೆ. ಏನು ಹೇಳದೆ ಕೊನೆಗಳಿಗೆಯಲ್ಲಿ ಅವಕಾಶ ವಂಚನೆ ಮಾಡಿದ್ದಾರೆ ಎಂದರು.

ನಾನು ಯಾವುದೇ ನಿರ್ಧಾರವನ್ನು ಪ್ರಕಟಿಸುವ ಸ್ಥಿತಿಯಲ್ಲಿ ಇಲ್ಲ. ಪಕ್ಷ ನನಗೆ ಅನೇಕ ಅವಕಾಶಗಳನ್ನು ಕೊಟ್ಟಿದೆ. ಒಂದು ಸೋಲು ಕಾಣದ ಗೆಲ್ಲುವ ಅಭ್ಯರ್ಥಿ ನಾನು. ಬ್ರಾಹ್ಮಣ ಎಂಬ ಕಾರಣಕ್ಕೆ ನನಗೆ ಟಿಕೆಟ್ ಕೈತಪ್ಪಿದೆ. ಪಕ್ಷಕ್ಕೆ ನನ್ನ ಅಗತ್ಯವಿಲ್ಲ ಎಂದು ತೋರುತ್ತದೆ. ಕಷ್ಟಕಾಲದಲ್ಲಿ ಎದೆಯೊಡ್ಡಿ ಪಕ್ಷವನ್ನು ಬೆಳೆಸಿದ್ದೇವೆ. ಕಾರ್ಯಕರ್ತರ ಪರವಾಗಿ ನಾನು ಸದಾ ಕಾಲ ಇರುತ್ತೇನೆ. ಇನ್ನು ಮುಂದೆಯೂ ಕಾರ್ಯಕರ್ತರ ಕಷ್ಟಕ್ಕೆ ನಾನಿದ್ದೇನೆ. ಟಿಕೆಟ್ ಪಡೆದ ಯಶ್ ಪಾಲ್ ಸುವರ್ಣ ನಾನು ಬೆಳೆಸಿದ ಹುಡುಗ. ಯಶ್ ಪಾಲ್ ಸುವರ್ಣಗೆ ಟಿಕೆಟ್ ನೀಡಿದ ಬಗ್ಗೆ ಸಂತೋಷವಿದೆ. ಹಿರಿಯ ನಾಯಕ ರಿದ್ದಾಗಲು ಪಕ್ಷ ನನಗೆ ಇದೇ ರೀತಿ ಟಿಕೆಟ್ ನೀಡಿತ್ತು. ಆದರೆ ಪಕ್ಷದ ಪ್ರಚಾರಕ್ಕೆ ನನ್ನ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ನನಗೆ ಈ ಶಾಕ್ ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಮೂರು ಬಾರಿ ಶಾಸಕನಾದವನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಪಕ್ಷ ನನಗೆ ಕೊಟ್ಟಿರುವ ಅವಕಾಶಗಳ ಬಗ್ಗೆ ನಾನು ಕೃತಜ್ಞನಾಗಿರುತ್ತೇನೆ. ಮುಂದಿನ ದಿನಗಳಲ್ಲಿ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.

Related Posts

Leave a Reply

Your email address will not be published.