ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್‍ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು, ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು. ಇನ್ನು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
