22 ಮಂದಿಯ 16 ಲಕ್ಷ ಕೋಟಿ ರೂಪಾಯಿ ಸಾಲ:ಮೋದಿಯವರನ್ನು ಟೀಕಿಸಿದ ರಾಹುಲ್ ಗಾಂಧಿ

ಪ್ರಧಾನಿ ಮೋದಿಯವರ ಸರಕಾರವು 22 ಮಂದಿ ಉದ್ಯಮಿಗಳ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿ, ಹಿಮಾಚಲ ಪ್ರದೇಶಕ್ಕೆ 9,000 ಕೋಟಿ ರೂಪಾಯಿ ನೆರೆ ಪರಿಹಾರ ನೀಡದೆ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದರು.
ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿಯವರು ಪ್ರವಾಹ ಪರಿಹಾರ ನೀಡದೆಯೇ ಮೋದಿಯವರು ನೆರೆ ಪರಿಹಾರ ನೀಡಿದ್ದು ಬೇರೆಯದಕ್ಕೆ ಬಳಕೆ ಮಾಡಿದ್ದಾರೆ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೆ ಕಳ್ಳ ಹಣ ಸುರಿದು ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರಕಾರ ಬೀಳಿಸಲು ಕುತಂತ್ರ ಮಾಡುತ್ತಿದ್ದಾರೆ. ಅದಾನಿಯ ಶೇರು ಮಾರುಕಟ್ಟೆ ಏರಿಸುವ ಕೆಲಸ ಪ್ರಧಾನಿ ಮಾಡಬೇಕಿಲ್ಲ ಎಂದು ರಾಹುಲ್ ಗಾಂಧಿಯವರು ಹೇಳಿದರು.

ಹಿಮಾಚಲ ಪ್ರದೇಶದ ಸೇಬುಗಳನ್ನು ತಮ್ಮ ವ್ಯಕ್ತಿ ನಿಯಂತ್ರಿಸುವಂತೆಒಬ್ಬನನ್ನು ಬಿಟ್ಟಿದ್ದಾರೆ. ಇದರಿಂದ ಸೇಬು ಬೆಳೆಯುವವರಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತಲೇ ಮೊದಲು ಕೃಷಿಕರಿಗೆ ಸೂಕ್ತ ಬೆಂಬಲ ಬೆಲೆ ಸಿಗುವಂತೆ ಮಾಡಲಾಗುವುದು. ರೈತರ ಕೃಷಿ ಸಾಲ ಮನ್ನಾ ಮಾಡಲಾಗುವುದು ಎಂದು ರಾಹುಲ್ ಗಾಂಧಿಯವರು ತಿಳಿಸಿದರು.
