ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ : ರಾಜೇಶ್ ಕಡಲಕೆರೆ
ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು sea plane , Heli taxi , joy ride , River Cruise ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯೋಜನೆ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮೂಲಕ ತಿಳಿಸಿದ್ದು ಮಾತ್ರವಲ್ಲ ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕಾ ಸಲಕರಣೆ ಕಿಟ್ ಮೌಲ್ಯವನ್ನು 10 ಸಾವಿರದಿಂದ 20 ಸಾವಿರಕ್ಕೆ ಹೆಚ್ಚಿಸಿ ಮೀನುಗಾರಿಕೆ ಚಟುವಟಿಕೆಗೆ ಉತ್ತೇಜನ ನೀಡಿದ್ದು ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.


















