ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್‌ ಕುಮಾರ್ ಬಹರೈನ್ ಅವರಿಗೆ ಸಾರ್ವಜನಿಕ ಸನ್ಮಾನ ಮತ್ತು ರಾಜಾಭಿನಂದನೆ

ವಿದೇಶದಲ್ಲಿ ಕನ್ನಡ ಭಾಷೆ, ಕಲೆ, ಸಂಸ್ಕೃತಿಯನ್ನು ಪಸರಿಸಿ ಮೇಳೈಸಿದ ಅನಿವಾಸ ಭಾರತೀಯ ವಿಭಾಗದಲ್ಲಿ 2022ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬಹರೈನ್ ಅಂಬಲಪಾಡಿ ಇವರಿಗೆ ಸಾರ್ವಜನಿಕ ಸನ್ಮಾನ ಮತ್ತು ರಾಜಾಭಿನಂದನೆ ಕಾರ್ಯಕ್ರಮವು ಫೆ.19ರಂದು ಮಧ್ಯಾಹ್ನ 3.30ಕ್ಕೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಧರ್ಮಸ್ಥಳದ ನಿತ್ಯಾನಂದ ನಗರದ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಂ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅಶೀರ್ವಚನ ನೀಡಲಿದ್ದಾರೆ. ಉಡುಪಿ ಅಂಬಲಪಾಡಿ ಶ್ರೀ ಜರ್ನಾಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ.ಬೀ. ವಿಜಯ್ ಬಲ್ಲಾಳ್ ಶುಭಾಂಸನೆ ಗೈಯ್ಯಲಿದ್ದಾರೆ. ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ರಘುಪತಿ ಭಟ್ ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ದಯಾನಂದ ಕತ್ತಲ್‌ಸಾರ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೋಟಾ ಶ್ರೀನಿವಾಸ ಪೂಜಾರಿ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ಪ್ರವರ್ತಕರಾದ ನಾಡೋಜಾ ಡಾ. ಜಿ ಶಂಕರ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರವರ್ತಕರಾದ ಡಾ. ಎಂ. ಮೋಹನ್ ಆಳ್ವಾ. ಉಜ್ವಲ್ ಡೆವಲಪರ್‍ಸ್ ಪ್ರೈ. ಲಿ. ಇದರ ಆಡಳಿತ ನಿರ್ದೇಶಕರಾದ ಪುರುಷೋತ್ತಮ ಪಿ. ಶೆಟ್ಟಿ, ಸೇರಿದಂತೆ ಗಣ್ಯಾತಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Related Posts

Leave a Reply

Your email address will not be published.