ಸಂಸದ ಬಿ.ವೈ ರಾಘವೇಂದ್ರ ಅವರ ಪೋಟೋಗ್ರಾಫರ್ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ. ಪ್ರಸನ್ನ ಭಟ್ (26) ಮೃತ ಯುವಕ.

ಜನವರಿ 1 ರಂದು ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಮೃತ ಪ್ರಸನ್ನ ಭಟ್ ಅವರು ಮಾವತ್ತೂರು ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕನಕಪುರ ಗಾಮಾಂತರ ಪೆÇಲೀಸ್ ಠಾಣೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಶಿಕ್ಷಣದ ಬಳಿಕ ಪತ್ರಕರ್ತನಾಗಿದ್ದ ಪ್ರಸನ್ನ ಭಟ್ ಪೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಬಳಿಕ ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೆÇೀಟೊಗ್ರಾಫರ್ ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದು ಸಂಸದ ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.

Related Posts

Leave a Reply

Your email address will not be published.