ಆರು ಲಕ್ಷ ಹೆಕ್ಟೇರ್ ಭೂಮಿಯನ್ನುಡೀಮ್ಡ್ ಫಾರೆಸ್ಟ್‍ನಿಂದ ಮುಕ್ತ ಹೇಳಿಕೆ ಕೇವಲ ರಾಜಕೀಯ ಮಾತ್ರ : ರಮಾನಾಥ ರೈ

ರಾಜ್ಯದಲ್ಲಿ ಸುಮಾರು ಆರು ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್‍ನಿಂದ ಮುಕ್ತಗೊಳಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ನೀಡಿರುವ ಹೇಳಿಕೆಗಳು ಕೇವಲ ರಾಜಕೀಯ ಮಾತ್ರ. ಆ ಬಗ್ಗೆ ಸುಪ್ರೀಂ ಕೋರ್ಟ್‍ನಿಂದ ಆದೇಶವಾಗಬೇಕಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಡೀಮ್ಡ್ ಫಾರೆಸ್ಟ್ ಸಮಸ್ಯೆ ಕುರಿತಂತೆ ಮಾತನಾಡಿದ ಅವರು, ರಾಜಕೀಯ ವ್ಯಕ್ತಿಗಳು ಭಾಷಣ ಮಾಡಿ ಹೇಳಿಕೆ ನೀಡಿದಷ್ಟು ಅದು ಸರಳವಾಗಿಲ್ಲ ಎಂದರುಪ್ರಾಕೃತಿಕ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಡೀಮ್ಡ್ ಫಾರೆಸ್ಟ್ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ರಾಜ್ಯ ಸರಕಾರ ಕಂದಾಯ ಇಲಾಖೆಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವರದಿ ತಯಾರಿಸಲಾಗಿತ್ತು. ಸುಮಾರು 10 ಲಕ್ಷ ಹೆಕ್ಟೇರ್‍ನಲ್ಲಿ ಸುಮಾರು 6 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್‍ನಿಂದ ಕೈಬಿಡೇಕೆಂದು ವರದಿ ನೀಡಲಾಗಿತ್ತು. ಆದರೆ ಸರ್ವೆ ನಂಬರ್ ವಿಭಾಗವನ್ನು ಸರಿಯಾಗಿ ಗುರುತಿಸಿಲ್ಲ ಎಂದು ಅದನ್ನು ತಿರಸ್ಕರಿಸಲಾಗಿತ್ತು. ಈ ಬಗ್ಗೆ ಅರಣ್ಯ ಸಚಿವನಾಗಿದ್ದ ವೇಳೆ ಈ ವಿಷ ಕೈಗೆತ್ತಿಕೊಂಡು ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಲು ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು ಎಂದರು.ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದಲ್ಲಿ ವಿವಿಧ ಕ್ಷೇತ್ರಗಳಿಗೆ ಸಾಕಷ್ಟು ಆಕಾಂಕ್ಷಿಗಳಿಂದ ಟಿಕೆಟ್‍ಗಾಗಿ ಅರ್ಜಿಗಳು ಬಂದಿವೆ ಎಂದ ಮೇಲೆ ಪಕ್ಷದ ಮೇಲೆ ನಂಬಿಕೆ ಇದೆ. ಪಕ್ಷ ಜಯಗಳಿಸಲಿದೆ ಎಂಬ ಹಿನ್ನೆಲೆಯಲ್ಲಿ ಇಷ್ಟೊಂದು ಅರ್ಜಿಗಳು ಬಂದಿವೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ರಮಾನಾಥ ರೈ ಪ್ರತಿಕ್ರಿಯಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಶಿಧರ ಹೆಗ್ಡೆ, ಪ್ರತಿಭಾ ಕುಳಾಯಿ, ನವೀನ್ ಡಿಸೋಜಾ, ಅಪ್ಪಿ, ಸಲೀಂ, ಮುಸ್ತಫಾ, ಫಯಾಝ್, ಶಬೀರ್, ಕಿಶೋರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.