ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ರಮಾನಾಥ ರೈ ಭೇಟಿ

ಬಂಟ್ವಾಳ: ಬಾರಿ ಮಳೆಯಿಂದ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು, ಗೂಡಿನ ಬಳಿಯಲ್ಲಿ ಭೂ ಕುಸಿತ ಉಂಟಾಗಿ ಮನೆ, ರಸ್ತೆಗಳಿಗೆ ವ್ಯಾಪಕ ಹಾನಿ ಉಂಟಾಗಿರುವ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವ ನೀಡಿದರು. ಈ ಸಂದರ್ಭ ಹಾನೀಗೀಡಾದ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮನವಿ ಮಾಡಿಕೊಂಡರು. ಈ ಸಂದರ್ಭ ನಿಕಟಪೂರ್ವ ಜಿಲ್ಲಾ ಪಂಚಾಯತಿ ಸದಸ್ಯ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಚಂದ್ರಶೇಖರ್ ಕರ್ಣ, ಮಾಣಿಕ್ಯ ರಾಜ್ ಜೈನ್, ಜನಾರ್ದನ್ ಸಪಲ್ಯ ಮತ್ತಿತರರು ಉಪಸ್ಥಿತರಿದ್ದರು.