HomeFresh News“ರಾಪಟ” ತುಳು ಸಿನಿಮಾ - ಸಪ್ಟೆಂಬರ್ ನಲ್ಲಿ ವಿದೇಶಗಳಲ್ಲಿ ಪ್ರೀಮಿಯರ್ ಶೋ

“ರಾಪಟ” ತುಳು ಸಿನಿಮಾ – ಸಪ್ಟೆಂಬರ್ ನಲ್ಲಿ ವಿದೇಶಗಳಲ್ಲಿ ಪ್ರೀಮಿಯರ್ ಶೋ

ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ” ತುಳು ಸಿನಿಮಾದ ಪ್ರೀಮಿಯರ್ ಶೋ ಸಪ್ಟೆಂಬರ್‍ನಲ್ಲಿ ವಿದೇಶಗಳಲ್ಲಿ ನಡೆಯಲಿದೆ.

ಇದೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾ ಪ್ರೀಮಿಯರ್ ಶೋದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮಸ್ಕತ್‍ನಲ್ಲಿ ಆಯೋಜಿಸಲಾಗಿದ್ದು, ಈಗ ಚಿತ್ರದ ಪ್ರೀಮಿಯರ್ ಶೋ ವಿದೇಶಗಳಲ್ಲಿ ನಡೆಸಲು ಚಿತ್ರ ತಂಡ ಸಜ್ಜಾಗುತ್ತಿದೆ. ಸಪ್ಟೆಂಬರ್ 9 ಮತ್ತು 10ರಂದು ಯುಎಇ, 15ರಂದು ಬೆಹರಿನ್, 22ರಂದು ಮಸ್ಕತ್, 29 ರಂದು ಕತಾರ್‍ನಲ್ಲಿ ಪ್ರೀಮಿಯರ್ ಶೋ ನಡೆಯಲಿದೆ.

ಚಿತ್ರದಲ್ಲಿ ತುಳು ಚಿತ್ರ ರಂಗದ ದಿಗ್ಗಜರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ ಮುಂತಾದವರು ನಟಿಸಿದ್ದು, ಅನೂಪ್ ಸಾಗರ್ ನಾಯಕ ನಟನಾಗಿ ಹಾಗೂ ನಿರೀಕ್ಷ ಶೆಟ್ಟಿ ನಾಯಕಿಯ ಪಾತ್ರದಲ್ಲಿದ್ದಾರೆ. ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್ ಸುವರ್ಣ, ರಾಜನ್ ರಾಕೇಶ್ ಶೆಟ್ಟಿ, ಆಶಿಕಾ ಸುವರ್ಣ, ದೇವಿಕಾ ಆಚಾರ್ಯ, ಶೈಲ ರಾಜ್ ಪೂಜಾರಿ, ಅಭಿ ಶೆಟ್ಟಿ, ಮನೋಜ್ ಶೆಟ್ಟಿ, ಯಕ್ಷಿತ್ ಶೆಟ್ಟಿ, ಮಧು ಕುಮಾರ್ ಕಾರ್ಯನಿರ್ವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments